ಕೋವಿಡ್ ಕುರಿತು ತಪ್ಪು ಮಾಹಿತಿ ನೀಡಿದರೆ ಅಪರಾಧ ಎಂದು ಪರಿಗಣನೆ: ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ

Update: 2022-01-18 12:18 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಜ.18: ಸಾರ್ವಜನಿಕರಿಗೆ ಕೋವಿಡ್ ಕುರಿತು ತಪ್ಪು ಮಾಹಿತಿ ನೀಡಿದರೆ, ಅಪರಾಧ ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಸಿದೆ.

ಕೋವಿಡ್-19 ಬಗ್ಗೆ ವಿವಿಧ ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೂಲಕ, ಕೆಲವು ವೈದ್ಯಕೀಯ ಪರಿಣಿತರು, ವೈದ್ಯರು ಸಾರ್ವಜನಿಕರಿಗೆ ಅಪೂರ್ಣವಾದ, ತಪ್ಪು ಮತ್ತು ಆಧಾರರಹಿತ ಮಾಹಿತಿಯನ್ನು ನೀಡುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಇಂತಹ ಬೆಳವಣಿಗೆಯಿಂದ ಸಾರ್ವಜನಿಕರಲ್ಲಿ ಗೊಂದಲವನ್ನು ಉಂಟು ಮಾಡಲು ಕಾರಣವಾಗುತ್ತಿದೆ. ಜತೆಗೆ, ಇದರಿಂದ ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ರಾಜ್ಯದಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸದೆ ಸಾರ್ವಜನಿಕರು ವಿಮುಖರಾಗುವ ಸಾಧ್ಯತೆಗಳಿವೆ ಎಂಬ ಆತಂಕವನ್ನು ಹೊರಹಾಕಿದೆ. 

ಹೀಗಾಗಿ ಚಿಕಿತ್ಸೆ ಮತ್ತು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅನುಭವವನ್ನು ಹೊಂದಿರುವ ವೈದ್ಯಕೀಯ ಪರಿಣಿತರು, ವೈದ್ಯರು ಸಾರ್ವಜನಿಕರಿಗೆ ಕೋವಿಡ್-19ರ ಬಗ್ಗೆ ಮಾಹಿತಿ ನೀಡುವ ಸಂದರ್ಭದಲ್ಲಿ ಗರಿಷ್ಠ ಪ್ರಮಾಣದ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News