ಉಡುಪಿ ಜಿಲ್ಲೆ : 801 ಮಂದಿಗೆ ಕೊರೋನ ಪಾಸಿಟಿವ್

Update: 2022-01-18 13:54 GMT

ಉಡುಪಿ, ಜ.18: ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಹಠಾತ್ತನೆ ಏರಿಕೆ ಕಾಣಿಸತೊಡಗಿದ್ದು, ಮಂಗಳವಾರದಂದು ಒಟ್ಟು 801 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸದ್ಯ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 4301ಕ್ಕೇರಿದೆ. ಇವರೊಂದಿಗೆ ದಿನದಲ್ಲಿ 95 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 801 ಮಂದಿಯಲ್ಲಿ 386 ಮಂದಿ ಪುರುಷರು ಹಾಗೂ 415 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 533 ಮಂದಿ ಉಡುಪಿ ತಾಲೂಕಿಗೆ ಸೇರಿದವರಾಗಿದ್ದಾರೆ. ಕುಂದಾಪುರ ತಾಲೂಕಿನ 194 ಹಾಗೂ ಕಾರ್ಕಳ ತಾಲೂಕಿನ 67 ಮಂದಿಯೊಂದಿಗೆ ಹೊರಜಿಲ್ಲೆಗಳ ಏಳು ಮಂದಿುಯೂ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ.

ಮಂಗಳವಾರ ಪಾಸಿಟಿವ್ ಬಂದ 801 ಮಂದಿಯಲ್ಲಿ 30 ಮಂದಿಯನ್ನು ಕೋವಿಡ್ ಕೇರ್‌ ಸೆಂಟರ್‌ಗೂ, 19 ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 11 ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 741 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಜಿಲ್ಲೆಯಲ್ಲಿ ಒಟ್ಟು 150 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದು ಇವರಲ್ಲಿ 10 ಮಂದಿ ವೆಂಟಿಲೇಟರ್, 16 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಸೋಮವಾರ 95 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿ ಕೊಂಡವರ ಸಂಖ್ಯೆ 1017ಕ್ಕೇರಿದೆ. ನಿನ್ನೆ ಜಿಲ್ಲೆಯ ಉಡುಪಿ ತಾಲೂಕಿನಲ್ಲಿ 2310 ಮಂದಿ, ಕುಂದಾಪುರದಲ್ಲಿ 706 ಹಾಗೂ ಕಾರ್ಕಳ ತಾಲೂಕಿನ 656 ಮಂದಿ ಸೇರಿದಂತೆ ಒಟ್ಟು 3672 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 5170ಕ್ಕೇರಿದೆ.

646 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 646 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 281 ಮಂದಿ ಲಸಿಕೆ ಪಡೆದರೆ, 163 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 25 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಸೇರಿದ್ದಾರೆ.

1645 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 1645 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 438 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 877 ಮಂದಿ ಮೊದಲ ಡೋಸ್ ಹಾಗೂ 768 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News