2021-22ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

Update: 2022-01-18 15:08 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.18: 2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವರ್ಷದಲ್ಲಿ ಪಠ್ಯಕ್ರಮ ಮತ್ತು ಪ್ರಶ್ನೆಪತ್ರಿಕೆಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ಸ್ಪಷ್ಟಪಡಿಸಿದೆ.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ಫೆ.17ರಿಂದ ಫೆ.25ರವರೆಗೆ ನಡೆಸಲಿದೆ. ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಾ.14ರಿಂದ ಮಾ.25ರವರೆಗೆ ನಡೆಯಲಿದ್ದು, ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗುವುದು. ಇನ್ನು ಅಂತಿಮ ಪರೀಕ್ಷೆಯ ವೇಳಾ ಪಟ್ಟಿ ತಾತ್ಕಾಲಿಕವಾಗಿ ಎ.16 ರಿಂದ ಮೇ.4ರವರೆಗೆ ನಿಗಧಿಪಡಿಸಲಾಗಿದ್ದು, ಫೆ.1ರೊಳಗೆ ಆಕ್ಷಪಣೆ ಸಲ್ಲಿಸಿದ್ದಲ್ಲಿ ವೇಳಾಪಟ್ಟಿಯನ್ನು ಮುಂದೂಡಲಾಗುವುದು. ಆಕ್ಷೆಪಣೆಗಳನ್ನು  ಈ-ಮೇಲ್ jdexam.dpue@gmail.com ಮಾಡಬಹುದಾಗಿದೆ. 

ಪ್ರಥಮ ಪಿಯುಸಿ ಪರಿಕ್ಷೆಯ ಅಂತಿಮ ಪರೀಕ್ಷೆಗಳು ಮಾ.28ರಿಂದ ಎ.13ರವರೆಗೆ ನಡೆಯಲಿದ್ದು, ಪ್ರಶ್ನೆಪತ್ರಿಕೆಗಳು ಉಪನಿರ್ದೇಶಕರ ನೇತೃತ್ವದಲ್ಲಿ ಸಿದ್ಧಗೊಳಿಸಲಾಗುವುದು. 

ಇನ್ನು ಪ್ರಥಮ ಮತ್ತು ದ್ವಿತೀಯ ಪಿಯುಸಿ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ಬಾರಿಯೂ ಭಾಷಾ ವಿಷಯಗಳಲ್ಲಿ ಶೇ.30ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಿ, ಶೇ.70ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆ ನಡೆಸಲಾಗುವುದು. ಉಳಿದ ಎಲ್ಲಾ ಐಚ್ಚಿಕ ವಿಷಯಗಳಲ್ಲಿ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಯನ್ನು ನಡೆಸಲಾಗುತ್ತದೆ. 

ದ್ವಿತೀಯ ಪಿಯುಸಿ ಐಚ್ಚಿಕ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚು ಪ್ರಶ್ನೆಗಳನ್ನು ನೀಡಿ, ವಿದ್ಯಾರ್ಥಿಗಳು ತಮಗೆ ಇಷ್ಟ ಬಂದ ಪ್ರಶ್ನೆಗಳನ್ನು ಆರಿಸಿಕೊಂಡು ಬರೆಯಲು ಅವಕಾಶ ಕಲ್ಪಿಸಲಾಗಿದೆ. ವಿಷಯವಾರು ವೇಳಾಪಟ್ಟಿಯನ್ನು ಇಲಾಖೆಯ ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ ಎಂದು ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News