​ಶಾಲಾ, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2022-01-18 15:43 GMT

ಮಂಗಳೂರು, ಜ.18: ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳು ಮುನ್ನೆಚ್ಚರಿಕೆ ವಹಿಸುವಂತೆ ದ.ಕ.ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

*ಶಾಲಾ-ಕಾಲೇಜುಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಕೋವಿಡ್ ಸುರಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
*ಶೈಕ್ಷಣಿಕ ತರಗತಿಗಳನ್ನು ಹೊರತುಪಡಿಸಿ ಯಾವುದೇ ಸಾಂಸ್ಕೃತಿಕ, ಕ್ರೀಡಾ ಮತ್ತಿತರ ಸಮೂಹ ಚಟುವಟಿಕೆಗಳಿಗೆ ಮುಂದಿನ ಆದೇಶದ ವರೆಗೆ ನಡೆಸಬಾರದು.

*5ಕ್ಕಿಂತ ಹೆಚ್ಚಿನ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಅಂತಹ ಶಾಲೆ ಅಥವಾ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ರದ್ದುಪಡಿಸಿ ಆನ್‌ಲೈನ್ ತರಗತಿಗಳನ್ನು ಮಾತ್ರ ನಡೆಸಬೇಕು.
*ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹಾಸ್ಟೆಲ್ ಅಥವಾ ಮನೆಗಳಲ್ಲಿ ಐಸೋಲೇಶನ್‌ಗೆ ಒಳಪಡಿಸಬೇಕು.
*8ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶೇ. 100 ವ್ಯಾಕ್ಸಿನೇಷನ್ ಗುರಿ ತಲುಪಲು ಪ್ರಯತ್ನಿಸಬೇಕು.
*ಶಾಲೆಗಳಲ್ಲಿ ಕಡ್ಡಾಯವಾಗಿ ಹೆತ್ತವರ ಮತ್ತು ಶಿಕ್ಷಕರ ಸಭೆಯನ್ನು ಕರೆದು ಭೌತಿಕ ಅಥವಾ ಆನ್‌ಲೈನ್ ತರಗತಿಗಳ ಬಗ್ಗೆ ಅವರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕು.
*ಶಾಲೆಗಳಲ್ಲಿ ಭೌತಿಕ ತರಗತಿಗಳಿಗೆ ಹಾಜರಾಗಲು ಸಿದ್ಧರಿಲ್ಲದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಕಡ್ಡಾಯವಾಗಿ ವ್ಯವಸ್ಥೆ ಮಾಡಬೇಕು ಮತ್ತು ಅವಕಾಶ ಕಲ್ಪಿಸಿಕೊಡಬೇಕು.
*ಆನ್‌ಲೈನ್ ಕ್ಲಾಸುಗಳ ಬಗ್ಗೆ ದೂರುಗಳನ್ನು ಸಲ್ಲಿಸಲು ಮಕ್ಕಳ ಪೋಷಕರಿಗೆ ಅನುಕೂಲವಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಸಹಾಯವಾಣಿ ಸಂಖ್ಯೆಯನ್ನು ತಕ್ಷಣದಿಂದ ಪ್ರಾರಂಭಿಸಬೇಕು.
*ಅಂತರ ರಾಜ್ಯ ವಿದ್ಯಾರ್ಥಿಗಳು ಹೆಚ್ಚಿರುವ ಕಾಲೇಜುಗಳಲ್ಲಿ ಮತ್ತು ಪಕ್ಕದ ರಾಜ್ಯದಿಂದ ದಿನನಿತ್ಯ ಪ್ರಯಾಣಿಸುವ ವಿದ್ಯಾರ್ಥಿಗಳು ಹೆಚ್ಚಿರುವ ಶಾಲಾ ಕಾಲೇಜುಗಳಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News