ಮೈಸೂರು: ಕಾಲುವೆ ಸಮೀಪ ಮಹಿಳೆಯ ಮೃತದೇಹ ಪತ್ತೆ

Update: 2022-01-18 16:10 GMT
ಸಾಂದರ್ಭಿಕ ಚಿತ್ರ

ಮೈಸೂರು: ಕಾಲುವೆ ಸಮೀಪ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಮೃತ ಮಹಿಳೆಯ ತಾಯಿ ಆರೋಪಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕಳಲೆ ಗ್ರಾಮದ ಕಾಲುವೆ ಏರಿ ರಸ್ತೆ ಮೇಲೆ ಕಳಲೆ ಗ್ರಾಮದ 45 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. 

ಮಗಳು ಧರಿಸಿದ್ದ ಬಟ್ಟೆಗಳು ಅಸ್ತವ್ಯಸ್ತವಾಗಿ ಕಂಡು ಬಂದಿದೆ. ಈ ಹಿನ್ನಲೆ ಯಾರೋ ದುಷ್ಕರ್ಮಿಗಳು ನನ್ನ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆಂದು ಮಹಿಳೆಯ ತಾಯಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

ಈ ಸಂಬಂಧ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News