ಉತ್ತರಪ್ರದೇಶ ವಿಧಾನಸಭಾ ಚುನಾವಣೆ : ಎಸ್ಪಿ ಪರ ಮಮತಾ ಬ್ಯಾನರ್ಜಿ ಪ್ರಚಾರ

Update: 2022-01-18 17:54 GMT

ಲಕ್ನೊ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ  ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಕೋಲ್ಕತ್ತಾದ ಅವರ ನಿವಾಸದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜವಾದಿ  ನಾಯಕ ಕಿರಣ್‌ಮೋಯ್ ನಂದಾ ಅವರು "ಫೆಬ್ರವರಿ 8 ರಂದು ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರೊಂದಿಗೆ ಮಮತಾ ಬ್ಯಾನರ್ಜಿ ಜಂಟಿ ವರ್ಚುವಲ್ ಸಭೆ ಮತ್ತು ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ'' ಎಂದು ಹೇಳಿದರು.

“ಉತ್ತರ ಪ್ರದೇಶ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನಮ್ಮ ಪರ ಪ್ರಚಾರ ಮಾಡಬೇಕೆಂದು ನಾವು ಬಯಸಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಅವರು ಯಶಸ್ಸುಸಾಧಿಸಿದ ನಂತರ ಇಡೀ ದೇಶದಲ್ಲಿ ಭಾರತೀಯ ಜನತಾ ಪಕ್ಷದ ಪ್ರಮುಖ ವಿರೋಧಿಯಾಗಿ ಗುರುತಿಸಲ್ಪಟ್ಟಿದ್ದಾರೆ. ಅವರ ಬೆಂಬಲವು ನಮ್ಮ ಕಾರ್ಯಕರ್ತರು ಹಾಗೂ  ಬಿಜೆಪಿಯನ್ನು ವಿರೋಧಿಸುತ್ತಿರುವ ಉತ್ತರ ಪ್ರದೇಶದ ಜನರನ್ನು ಉತ್ತೇಜಿಸುತ್ತದೆ' ಎಂದು ನಂದಾ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News