ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ: ನಟಿ ಪೂನಂ ಪಾಂಡೆಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ

Update: 2022-01-19 02:29 GMT

ಹೊಸದಿಲ್ಲಿ, ಜ. 18: ಅಶ್ಲೀಲ ಚಿತ್ರ ನಿರ್ಮಾಣ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ ಪೂನಂ ಪಾಂಡೆ ಅವರ ಬಂಧನಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ವಿಧಿಸಿದೆ.

ನಿರೀಕ್ಷಣಾ ಜಾಮೀನು ನಿರಾಕರಿಸಿ ಬಾಂಬೆ ಉಚ್ಚ ನ್ಯಾಯಾಲಯ ನೀಡಿದ ಆದೇಶದ ವಿರುದ್ಧ ಪಾಂಡೆ ಅವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ವಿನೀತ್ ಶರಣ್ ಹಾಗೂ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಪೀಠ ಮಹಾರಾಷ್ಟ್ರ ಸರಕಾರಕ್ಕೆ ನೋಟಿಸು ಜಾರಿ ಮಾಡಿದೆ. ‘‘ದೂರುದಾರರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು’’ ಎಂದು ಪೀಠ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿ ದಾಖಲಿಸಲಾದ ಎಫ್ಐಆರ್ನಲ್ಲಿ ನಟ ಶೆರ್ಲಿನ್ ಚೋಪ್ರಾ ಅವರೊಂದಿಗೆ ಪಾಂಡೆ ಕೂಡ ಆರೋಪಿ. ಪಾಂಡೆ ಸಲ್ಲಿಸಿದ ನಿರೀಕ್ಷಣಾ ಜಾಮೀನನ್ನು 2021 ನವೆಂಬರ್ 25ರಂದು ಉಚ್ಚ ನ್ಯಾಯಾಲಯ ತಿರಸ್ಕರಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News