ಗಣರಾಜ್ಯೋತ್ಸವ ಪರೇಡ್ ನಲ್ಲಿ 5,000-8,000 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ

Update: 2022-01-19 02:30 GMT

ಹೊಸದಿಲ್ಲಿ, ಜ. 18: ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿರುವುದರಿಂದ ಗಣರಾಜ್ಯೋತ್ಸವ ಪರೇಡ್ನಲ್ಲಿ 5,000-8000 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕಳೆದ ವರ್ಷ ಗಣರಾಜ್ಯೋತ್ಸವ ಪರೇಡ್ನಲ್ಲಿ 25 ಸಾವಿರ ಜನರು ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು.

ಈ ವರ್ಷ ಪರೇಡ್ನಲ್ಲಿ ಮುಖ್ಯ ಅತಿಥಿಗಳು ಪಾಲ್ಗೊಳ್ಳುವ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇನ್ನಷ್ಟೇ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ಪರೇಡ್ನಲ್ಲಿ ಮುಖ್ಯ ಅತಿಥಿ ಇರಲಿಲ್ಲ. ಈ ವರ್ಷ ಗಣರಾಜ್ಯೋತ್ಸವ ಸೂಪರ್ ಸ್ಪ್ರೆಡರ್ ಆಗದಿರಲು ಜನರನ್ನು ದೂರ ಇರಿಸುವ ಹಾಗೂ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೇಡ್ನಲ್ಲಿ ಪಾಲ್ಗೊಳ್ಳುವ ಜನರ ಸಂಖ್ಯೆಯನ್ನು ಗಣನೀಯವಾಗಿ ಮೊಟಕುಗೊಳಿಸಲಾಗಿದೆ.

ಖಚಿತ ಸಂಖ್ಯೆಯ ಬಗ್ಗೆ ಇನ್ನಷ್ಟೇ ನಿರ್ಧರಿಸಬೇಕಿದೆ. ಏನೇ ಆದರೂ ಈ ವರ್ಷ 5 ಸಾವಿರದಿಂದ 8 ಸಾವಿರ ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಟಿ.ವಿ. ಹಾಗೂ ಲೈವ್ ಸ್ಕ್ರೀಮಿಂಗ್ನಲ್ಲಿ ಪರೇಡ್ ವೀಕ್ಷಿಸಲು ಜನರನ್ನು ಪ್ರೋತ್ಸಾಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News