ಮಹಿಳೆ ಮೇಲೆ ಹಲ್ಲೆ ಆರೋಪ: ಹೆಣ್ಣೂರು ಠಾಣೆ ಇನ್ ಸ್ಪೆಕ್ಟರ್ ವಿರುದ್ಧ ಆಯುಕ್ತರಿಗೆ ದೂರು

Update: 2022-01-19 13:00 GMT
ಇನ್‍ಸ್ಪೆಕ್ಟರ್ ವಸಂತ್‍ಕುಮಾರ್

ಬೆಂಗಳೂರು, ಜ.19: ಲೈಂಗಿಕ ದೌರ್ಜನ್ಯ ಹಾಗೂ ಸುಳ್ಳು ಪ್ರಕರಣ ದಾಖಲಿಸಿ ತನ್ನ ಮೇಲೆ ಹೆಣ್ಣೂರು ಪೊಲೀಸ್ ಇನ್‍ ಸ್ಪೆಕ್ಟರ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಇನ್‍ಸ್ಪೆಕ್ಟರ್ ವಸಂತ್‍ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಹಿಳೆ ದೂರು ನೀಡಿದ್ದು, ತನ್ನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದೆ, ಅವರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯವೆಸಗಿ ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಏನಿದು ಆರೋಪ?: ಸಂತ್ರಸ್ತ ಮಹಿಳೆ ಹಲವು ದಿನಗಳಿಂದ ಭೋಗ್ಯಕ್ಕೆ ಪಡೆದ ಮನೆಯಲ್ಲಿ ವಾಸವಿದ್ದು, ನೀರಿನ ಬಿಲ್ ಕಟ್ಟಿರಲಿಲ್ಲ. ಇದನ್ನು ಮನೆ ಮಾಲಕರು ಪ್ರಶ್ನಿಸಿದಾಗ, ಅವರೊಂದಿಗೆ ಮಾತಿನ ಚಕಮಕಿ ನಡೆಸಿ, ಹಲ್ಲೆ ಸಹ ಮಾಡಿದ್ದಾರೆ. ವರಲಕ್ಷ್ಮೀ ಎಂಬುವರು ಪತಿ ಸಂತ್ರಸ್ತ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೆಣ್ಣೂರು ಪೊಲೀಸ್ ಠಾಣೆಗೆ ತೆರಳಿದರೆ, ಇನ್‍ಸ್ಪೆಕ್ಟರ್ ವಸಂತ್‍ಕುಮಾರ್ ಪ್ರಕರಣ ದಾಖಲಿಸಿಕೊಂಡಿಲ್ಲ. ಅಲ್ಲದೇ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News