ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ವಿಜ್ಞಾನ ಸ್ಪರ್ಧೆ

Update: 2022-01-19 14:39 GMT

ಉಡುಪಿ, ಜ.19: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಆನ್‌ಲೈನ್ ಮೂಲಕ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.

ಸ್ಪರ್ಧೆಗಳ ವಿವರ: ವಿನ್ಯಾಸ, ಅಭಿವೃದ್ಧಿ ಮತ್ತು ಮಾದರಿ/ಪೋಸ್ಟರ್ ತಯಾರಿಕೆ ಸ್ಪರ್ಧೆಗೆ ಗೂಗಲ್ ಫಾರ್ಮ್ ಮೂಲಕ ಜನವರಿ 22ರೊಳಗೆ ನೋಂದಾಯಿಸಿಕೊಳ್ಳದಾಗಿದೆ. ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆಗೆ ಗೂಗಲ್ ಫಾರ್ಮ್ ಮೂಲಕ ನೋಂದಾಯಿಸಿಕೊಳ್ಳಲು ಫೆಬ್ರವರಿ 2 ಕೊನೆಯ ದಿನ ವಾಗಿದ್ದು, ಹೆಚ್ಚಿನ ಮಾಹಿತಿಗೆ ವಿಕ್ರಮ್ ಆರ್ (ಮೊಬೈಲ್:9481813491) ಇವರನ್ನು ಸಂಪರ್ಕಿಸಬಹುದಾಗಿದೆ.

ವಿಜ್ಞಾನ ಚಿತ್ರಕಲಾ ಸ್ಪರ್ಧೆಗೆ ಗೂಗಲ್ ಫಾರ್ಮ್ ಮೂಲಕ ಫೆಬ್ರವರಿ 7 ರೊಳಗೆ ಹೆಸರು ನೋಂದಾಯಿಸಿ ಕೊಳ್ಳಬಹುದು. ಸುಸ್ಥಿರ ಭವಿಷ್ಯಕ್ಕಾಗಿ ಸಮಗ್ರ ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಕೆ ಕುರಿತ ಪ್ರಬಂಧ ಸ್ಪರ್ಧೆಗೆ ಫೆಬ್ರವರಿ 2 ರ ಒಳಗೆ ಗೂಗಲ್ ಫಾರ್ಮ್ ಹಾಗೂ ಪ್ರೌಢ ಶಾಲಾ ಶಿಕ್ಷಕರು ಪ್ರಬಂಧ ಸ್ಪರ್ಧೆಗೆ ಗೂಗಲ್ ಫಾರ್ಮ್ ಮೂಲಕ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಳಿಗಾಗಿ ಪ್ರಿಯಾಂಕ (ಮೊ.ನಂ: 8105747283), ಅಂಜನಿ (ಮೊ.ನಂ: 8722262281) ಇವರನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News