ಮಂಗಳೂರು; ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Update: 2022-01-20 08:38 GMT

ಮಂಗಳೂರು : ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಉಂಟಾದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಇಂದು ರಾತ್ರಿ 11.45ರ ಸುಮಾರಿಗೆ ನಡೆದಿದೆ.

ರಸ್ತೆಯಲ್ಲಿ ಪಾನ್ ಕಾರ್ಡ್ ದೊರೆತ ಆಧಾರದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಸಚಿನ್ ಕೆ.ಎಂ. ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News