ಕೆಎಸ್‍ಓಯು ಕುಲಪತಿ ಪ್ರೊ.ವಿದ್ಯಾಶಂಕರ್ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

Update: 2022-01-19 19:32 GMT

ಮೈಸೂರು,ಜ.19: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿದ್ಯಾಶಂಕರ್ ಸೇರಿದಂತೆ ಇತರೆ ಕೆಲವು ಅಧಿಕಾರಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ವರುಣಾ ಮಹೇಶ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ.

ಮೈಸೂರು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವೇದಿಕೆಯ ಅಧ್ಯಕ್ಷ ವರುಣಾ ಮಹೇಶ್ ಅವರು ksou ಕುಲಪತಿ ವಿದ್ಯಾಶಂಕರ್ ಸೇರಿದಂತೆ ಇತರ ಕೆಲವು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ.

ಕರ್ನಾಟಕದ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಾಗಿರುವ ಡಾ. ಎಸ್. ವಿದ್ಯಾಶಂಕರ್ ಅವರು ತಾವು ಆಡಳಿತಕ್ಕೆ ಸೇರಿಕೊಂಡಾಗಿನಿಂದ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸರ್ಕಾರದ ತಡೆಯಿದ್ದರೂ, ಎಲ್ಲ ನಿಯಮಗಳನ್ನು ಉಲ್ಲಂಘಿಸಿ 200ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಿದ್ದಾರೆ. ಜೊತೆಗೆ ವಾಹನಗಳನ್ನು ಖರೀದಿಸಿದ್ದಾರೆ. ಅವಶ್ಯಕತೆ ಇಲ್ಲದಿದ್ದರೂ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ರೀತಿಯಾಗಿ ಕುಲಪತಿಯವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಅಲ್ಲದೇ ಇವರ ಜೊತೆಗೆ ಕುಲಸಚಿವರು, ಹಣಕಾಸು ಅಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಇವರ ವಿರುದ್ಧ ವರುಣಾ ಮಹೇಶ್ ದಾಖಲೆ ಸಮೇತ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರನ್ನು ನೀಡಿದ್ದಾರೆ. ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News