ಶಾಲೆ -ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಅಶಿಸ್ತು: ಬಿ.ಸಿ ನಾಗೇಶ್

Update: 2022-01-20 13:48 GMT

ಬೆಂಗಳೂರು: `ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್(ಸ್ಕಾರ್ಫ್) ಧರಿಸುವುದು ಅಶಿಸ್ತು. ಶಾಲೆ-ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ' ಎಂದು ಪ್ರಾಥಮಿಕ  ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. 

ಈ ಕುರಿತು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವರು,  ''ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ಕೆಲ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯಗೊಳಿಸುತ್ತಿದ್ದಾರೆ'' ಎಂದು ಹೇಳಿದರು.

ಇತ್ತೀಚೆಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿನ ಸ್ಕಾರ್ಫ್ ವಿವಾದ ಇನ್ನೂ ಬಗೆಹರಿದಿಲ್ಲ, ಕಳೆದ ಎರಡು ವಾರಗಳಿಂದ ಸ್ಕಾರ್ಫ್ ಹಾಕಿದ ಕಾರಣಕ್ಕಾಗಿ ತರಗತಿ ಪ್ರವೇಶ ನಿರಾಕರಿಸಲ್ಪಟ್ಟ ಎಂಟು ಮಂದಿ ವಿದ್ಯಾರ್ಥಿನಿಯರು, ಈಗಲೂ ಕಾಲೇಜಿನ ಹೊರಗಡೆಯೇ ಕುಳಿತು ಓದು ಬರಹಗಳನ್ನು ನಡೆಸುತ್ತಿದ್ದಾರೆ. 

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರಿಯ ಮಟ್ಟದಿಂದ ಖಂಡನೆ ವ್ಯಕ್ತವಾಗಿದ್ದು, ಹಲವಾರು ಮಂದಿ ಗಣ್ಯರು ಈ ಕುರಿತು ಟ್ವಿಟರ್ ನಲ್ಲಿ ಧ್ವನಿಯೆತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News