ದ.ಕ.ಜಿಲ್ಲೆ: 974 ಮಂದಿಗೆ ಕೋವಿಡ್ ಪಾಸಿಟಿವ್; ಓರ್ವ ಮೃತ್ಯು

Update: 2022-01-20 15:26 GMT

ಮಂಗಳೂರು, ಜ.20: ದ.ಕ.ಜಿಲ್ಲೆಯಲ್ಲಿ ಗುರುವಾರ 974 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ಬಲಿಯಾಗಿದ್ದಾರೆ. 749 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.8.67 ದಾಖಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ 1,25,262 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,17,749 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,715 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 5798 ಸಕ್ರಿಯ ಪ್ರಕರಣವಿದೆ.

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 93,797 ಪ್ರಕರಣ ದಾಖಲಿಸಿ, 1,13,55,430 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News