ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2022-01-20 16:15 GMT

ಉಡುಪಿ, ಜ.20: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್- ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು -https://ssp.postmatric.karnataka.gov.in- ನಲ್ಲಿ ನೇರವಾಗಿ ಮಾರ್ಚ್ 31ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿ ಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ -https://dom.karnataka.gov.in/udupi/public- ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News