ವಿವಿಧ ಸಮುದಾಯಗಳ ಸಮೀಕ್ಷೆ: ಮಾಹಿತಿಗಳನ್ನು ನೀಡಲು ಸೂಚನೆ
Update: 2022-01-20 21:46 IST
ಉಡುಪಿ, ಜ.20: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ವಾಸವಿರುವ ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳನ್ನು ಗುರುತಿಸಿ, ಈ ಸಮುದಾಯಗಳ ಅಭಿವೃದ್ಧಿಗೆ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಸಂಬಂಧ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಕಂದಾಯ ನಿರೀಕ್ಷಕರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ, ಮಾಹಿತಿ ಪಡೆಯಲಾಗುತ್ತಿದೆ.
ಜಿಲ್ಲೆಯ ಮೇಲ್ಕಾಣಿಸಿದ ಸಮುದಾಯಗಳು ತಮ್ಮ ಮಾಹಿತಿಯನ್ನು ಫೆಬ್ರವರಿ 5ರೊಳಗೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.