ಎಂಟಿಎಸ್ ಹುದ್ದೆಗಳ ಪರೀಕ್ಷೆಯಲ್ಲಿ ಪ್ರಾದೇಶಿಕ ಭಾಷೆಗಳಿಗೂ ಅವಕಾಶ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2022-01-20 16:23 GMT

ಬೆಂಗಳೂರು, ಜ.20: ಕಾರ್ಮಿಕರ ರಾಜ್ಯ ವಿಮಾ ನಿಗಮವು ಕಳೆದ ಡಿ.27ರಂದು ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್ ಹಾಗೂ ಮಲ್ಟಿ ಟಾಸ್ಕ್ ಸಿಬ್ಬಂದಿಗಳು ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿತ್ತು. ಈ ಕೆಳಹಂತದ ಹುದ್ದೆಗಳಿಗೆ ಕರ್ನಾಟಕದಲ್ಲಿ ಹಿಂದಿ ಜತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ನಾನು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಅವರೊಂದಿಗೆ ಚರ್ಚಿಸಿದ್ದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಈಗ ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಇದರಿಂದ ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರಿಗೆ ಧನ್ಯವಾದ ಹೇಳಬಯಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News