ಕಾರ್ಕಳ: ಕೊರೋನ ಭೀತಿಯಲ್ಲಿ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

Update: 2022-06-19 04:49 GMT

ಕಾರ್ಕಳ, ಜ.20: ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ಕೊರೋನ ಭೀತಿಯಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ  ಗುರುವಾರ ನಡೆದಿದೆ.

ಮೃತರನ್ನು ಹೊಸ್ಮಾರು ನಿವಾಸಿ ಲಕ್ಷ್ಮೀ(65) ಎಂದು ಗುರುತಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕೊರೋನ ಪಾಸಿಟಿವ್ ಅಲ್ಲದಿದ್ದರೂ ಕೊರೋನ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News