ಕಲಬುರಗಿ: ಮಕ್ಕಳೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಇಬ್ಬರು ಮಕ್ಕಳು ಮೃತ್ಯು

Update: 2022-01-20 17:06 GMT
ಸಾಂದರ್ಭಿಕ ಚಿತ್ರ

ಕಲಬುರಗಿ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಒಂದೂವರೆ ವರ್ಷದ ದಾಕ್ಷಾಯಿಣಿ ಮತ್ತು ಎರಡು ತಿಂಗಳ ಹಸುಗೂಸು ಸಾವನ್ನಪ್ಪಿದ್ದು, ತಾಯಿ ಭಾಗಮ್ಮಳನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಅಸ್ವಸ್ಥಗೊಂಡ ತಾಯಿ ಭಾಗಮ್ಮಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದ್ಯ ತಾಯಿ ಚೇತರಿಸಿಕೊಂಡಿದ್ದಾಳೆ.

ಭಾಗಮ್ಮ ದೇಸಾಯಿ ಕಲ್ಲೂರು ಗ್ರಾಮದ ನಿವಾಸಿಯಾಗಿದ್ದು, ನಿನ್ನೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಮುಚ್ಚಿಹಾಕಲು ನಿನ್ನೆಯೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ. 

ಈ ಸಂಬಂಧ ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದ್ದು, ಪೊಲೀಸರು ಭಾಗಮ್ಮಳನ ವಿಚಾರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News