ಬೆಂಗಳೂರು ಹೊರತುಪಡಿಸಿ ಉಳಿದೆಡೆ ಶಾಲೆ -ಕಾಲೇಜು ಆರಂಭ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Update: 2022-01-21 14:29 GMT

ಬೆಂಗಳೂರು, ಜ. 21: ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ನಡೆಯಲಿವೆ. ಆದರೆ, ಬೆಂಗಳೂರು ನಗರದಲ್ಲಿ ಶಾಲೆಗಳ ಆರಂಭ ಕುರಿತು ಮುಂದಿನ ವಾರ(ಜ.28) ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಒಂದೊಂದೆ ಶಾಲೆಯನ್ನು ಯೂನಿಟ್ ಆಧಾರದಲ್ಲಿ ತೆಗೆದುಕೊಂಡು ಅಲ್ಲಿನ ತಹಶೀಲ್ದಾರ್, ಬಿಇಒ ಇವರೆಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ. ಪಾಸಿಟಿವಿಟಿ ದರ ಹೆಚ್ಚಿದ್ದರೆ ಮಾತ್ರ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದರು.

ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಾಸಿಟಿವ್ ಬಂದರೆ ಏಳು ದಿನ, ಕಡಿಮೆ ಬಂದರೆ ಮೂರು ದಿನ ಶಾಲೆಗಳನ್ನ ಬಂದ್ ಮಾಡಿ ಅನಂತರ ಶಾಲೆಯನ್ನು ಆರಂಭಿಸಲಾಗುತ್ತದೆ. ಆದರೆ, ಬೆಂಗಳೂರು ನಗರದಲ್ಲಿ ಜ.29ರವರೆಗೆ ಶಾಲೆಗಳನ್ನ ತೆರೆಯುವುದಿಲ್ಲ. ಮುಂದಿನ ವಾರ(ಜ.28) ಮತ್ತೊಮ್ಮೆ ಸಭೆ ನಡೆಸಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News