×
Ad

ಉಡುಪಿ: ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ

Update: 2022-01-21 20:36 IST

ಉಡುಪಿ, ಜ. 21: ಇದೇ ಜನವರಿ 26ರಂದು ನಡೆಯುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ಅದ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್‌ಹಾಲ್‌ನಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್ ಮಾರ್ಗಸೂಚಿಗಳ ಅನ್ವಯ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್, ಕರಾವಳಿ ಕಾವಲು ಪಡೆ, ಅಗ್ನಿಶಾಮಕ, ಗೃಹರಕ್ಷಕ, ಅರಣ್ಯ ಮತ್ತು ಅಬಕಾರಿ ಇಲಾಖೆಯಿಂದ ಮತ್ತು ಕಾಲೇಜು ಎನ್‌ಸಿಸಿ ವಿದ್ಯಾರ್ಥಿಗಳಿಂದ ಪಥ ಸಂಚಲನ ಏರ್ಪಡಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕೃಷಿಕರಿಗೆ ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಕಲಚೇತನ ವಿದ್ಯಾರ್ಥಿಗಳಿಗೆ ಸನ್ಮಾನಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾನೆಮಾಡಿದಕೃಷಿಕರಿಗೆಜಿಲ್ಲಾಶ್ರೇಷ್ಠಕೃಷಿಕಪ್ರಶಸ್ತಿಹಾಗೂಶೈಕ್ಷಣಿಕಕ್ಷೇತ್ರದಲ್ಲಿವಿಶೇಷಸಾನೆ ಮಾಡಿದ ವಿಕಲಚೇತನ ವಿದ್ಯಾರ್ಥಿಗಳಿಗೆ ಸನ್ಮಾನಿಸುವಂತೆ ಸೂಚಿಸಿದರು. ಕೋವಿಡ್ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡದಂತೆ ತಿಳಿಸಿದ ಜಿಲ್ಲಾಧಿಕಾರಿ, ಗಣರಾಜ್ಯೋತ್ಸವ ಕಾರ್ಯಕ್ರಮದ ನೇರ ಪ್ರಸಾರವನ್ನು ವೆಬ್‌ಕಾಸ್ಟಿಂಗ್ ಮೂಲಕ ಪ್ರಸಾರ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕಾರ್ಯಕ್ರಮವನ್ನು ವ್ಯವಸ್ಥಿತ ರೀತಿಯಲ್ಲಿ ಆಯೋಜಿಸಲು ವಿವಿಧ ಅಧಿಕಾರಿ ಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿ, ಎಲ್ಲಾ ಸಮಿತಿ ಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News