ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತಾಯಿ, ಮಗು ಮೃತ್ಯು: ವೈದ್ಯರ ನಿರ್ಲಕ್ಷ್ಯ ಆರೋಪ

Update: 2022-01-22 05:00 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಜ. 21: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ವಿಟ್ಲ ಮೂಲದ ಸವಿತಾ (33) ಹೆರಿಗೆಗಾಗಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದರು.  ಮಗು ಬೆಳಗ್ಗೆ ಮೃತಪಟ್ಟಿದೆ. ಸಂಜೆ ವೇಳೆ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯವರು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ಮೃತ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯ ಕಾರಣವಾಗಿದ್ದು ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ವೈದ್ಯರ ಜತೆ ಮಾತನಾಡುವಂತೆ ಸೂಚಿಸಿದ್ದೇನೆ. ಅವರು ವೈದ್ಯರೊಂದಿಗೆ ಮಾತನಾಡಿದ ಬಳಿಕ ನೀಡುವ ದೂರಿನಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News