ಬೇಂದ್ರೆ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಸೋಮಶೇಖರ ಇಮ್ರಾಪುರ ಆಯ್ಕೆ

Update: 2022-01-21 17:50 GMT

ಬೆಂಗಳೂರು, ಜ.21: ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ನೀಡುವ 2022ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಜಾನಪದ ತಜ್ಞ ಹಾಗೂ ಕವಿ ಡಾ. ಸೋಮಶೇಖರ ಇಮ್ರಾಪುರ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಜ. 31ರಂದು ಸಾಧನಕೇರಿಯ ಬೇಂದ್ರ ಭವನದಲ್ಲಿ ನಡೆಯುವ ಬೇಂದ್ರೆ ಅವರ 126ನೇ ಜನ್ಮದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News