ಸಿಂಗಟಾಲೂರು ಏತ ನೀರಾವರಿ ಯೋಜನೆ: ಡಿಸೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ

Update: 2022-01-21 17:54 GMT

ಬೆಂಗಳೂರು, ಜ.21: ಸಿಂಗಟಾಲುರು ಏತ ನೀರಾವರಿ ಯೋಜನೆಯ ಪ್ಯಾಕೇಜ್ 6ರ ಟೆಂಡರ್ ಅನ್ನು ಮಾರ್ಚ್ 31ರೊಳಗೆ ಕರೆದು ಯೋಜನೆಯನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏತ ನೀರಾವರಿ ಯೋಜನೆಯ ಪ್ಯಾಕೇಜ್ 6ನ್ನು ಮರು ಅಂದಾಜು ಮಾಡಿ, ಮಧ್ಯಪ್ರದೇಶ ಮಾದರಿಯಲ್ಲಿ ಕಾಮಗಾರಿಯನ್ನು ಕೈಗೊಂಡು ರೈತರಿಗೆ ಅನುಕೂಲವಾಗಲು ನೇರವಾಗಿ ರೈತರ ಹೊಲದಲ್ಲಿಯೇ ಔಟ್‍ಲೆಟ್ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕೊಪ್ಪಳ ಬ್ರಾಂಚ್ ಕಾಲುವೆ ಅಡಿಯಲ್ಲಿ ಬರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಸೂಚಿಸಿದರು.

ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್, ಶಾಸಕ ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News