ಉತ್ತರಪ್ರದೇಶ ಚುನಾವಣೆ: ಕರ್ಹಾಲ್ ನಿಂದ ಅಖಿಲೇಶ್ ಯಾದವ್ ಸ್ಪರ್ಧೆ

Update: 2022-01-22 08:05 GMT

ಲಕ್ನೊ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್  ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿ ಜಿಲ್ಲೆಯಲ್ಲಿರುವ  ಕರ್ಹಾಲ್‌ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು NDTV ವರದಿ ಮಾಡಿದೆ.

ಅಖಿಲೇಶ್  ಯಾದವ್ ಅವರ ತಂದೆ ಹಾಗೂ  ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರನ್ನು ಐದು ಬಾರಿ ಲೋಕಸಭೆಗೆ ಆಯ್ಕೆ ಮಾಡಿದ ಮೈನ್‌ಪುರಿ ಲೋಕಸಭಾ ಕ್ಷೇತ್ರದಲ್ಲಿರುವ  ಐದು ವಿಧಾನಸಭಾ ಸ್ಥಾನಗಳಲ್ಲಿ ಕರ್ಹಾಲ್ ಕೂಡ ಒಂದಾಗಿದೆ.

ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಬಿಜೆಪಿಯ ಭದ್ರ ಕೋಟೆ ಗೋರಖ್ ಪುರದಿಂದ ಸ್ಪರ್ಧಿಸಲು ಈಗಾಗಲೇ ನಿರ್ಧರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News