ಮೈಸೂರು: ಜ.24 ರಿಂದ ಶಾಲೆಗಳ ಆರಂಭ; ಜಿಲ್ಲಾದಿಕಾರಿ ಡಾ.ಬಗಾದಿ ಗೌತಮ್ ಆದೇಶ

Update: 2022-01-22 17:43 GMT

ಮೈಸೂರು,ಜ.22: ಜಿಲ್ಲೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆಯ ಕ್ರಮಗಳನ್ನು ಒಳಗೊಂಡಂತೆ ಜ.24ರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಎಂದಿನಂತೆ ಪ್ರಾರಂಭಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ನೀಡಿದ್ದಾರೆ.

ಮೈಸೂರು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ವಸತಿ ಶಾಲೆಗಹಳಲ್ಲಿ ಕೋವಿಡ್-19ರ ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಜ.24ರಿಂದ ಭೌತಿಕ ತರಗತಿಗಳನ್ನು ಎಂದಿನಂತೆ ನಡೆಸುವಂತೆ ಆದೇಶ ಪ್ರತಿಯಲ್ಲಿ ಸೂಚಿಸಿದ್ದಾರೆ.

ಕೊರೊನಾ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ತಾಲ್ಲೂಕು ವ್ಯಾಪ್ರತಿಯಲ್ಲಿ 1 ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿತ್ತು. 11ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಸುರಕ್ಷತೆಯೊಂದಿಗೆ ಭೌತಿಕ ತರಗತಿಗಳನ್ನು ನಡೆಸಲಾಗುತ್ತಿತ್ತು. ಇದರಿಂದ ತಾಲ್ಲೂಕನ್ನೇ ಘಟಕವೆಂದು ಪರಿಗಣಿಸಿ ಶಾಲೆಗಳನ್ನು ನಡೆಸಲಾಗುತ್ತಿತ್ತು.

ಆದರೀಗ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನೇ ಘಟಕವೆಂದು ಪರಿಗಣಿಸಿ ತಾಲ್ಲೂಕು ವೈದ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಹಸೀಲ್ದಾರ್ ಅವರ ತ್ರಿಸದಸ್ಯ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ, ಡಿಡಿಪಿಐ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರು ನೀಡಿರುವ ಶಿಫಾರಸ್ಸಿನ ಮೇರೆಗೆ ಶಾಲೆಗಳನ್ನು ಪುನರಾರಂಭಿಸಲು ಸೂಚನೆ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News