ಸಯ್ಯದ್ ಮೋದಿ ಇಂಟರ್‌ನ್ಯಾಶನಲ್ ಬ್ಯಾಡ್ಮಿಂಟನ್ ಟೂರ್ನಿ: ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಿಂಧು

Update: 2022-01-23 14:51 GMT

ಲಕ್ನೊ, ಜ.23: ಎರಡು ಬಾರಿ ಒಲಿಂಪಿಕ್ಸ್ ಪದಕ ಜಯಿಸಿರುವ ಪಿ.ವಿ. ಸಿಂಧು ಯುವ ಸಹ ಆಟಗಾರ್ತಿ ಮಾಳವಿಕಾ ಬಾನ್ಸೋಡ್‌ರನ್ನು ನೇರ ಗೇಮ್‌ಗಳ ಅಂತರದಿಂದ ಮಣಿಸುವ ಮೂಲಕ ಸಯ್ಯದ್ ಮೋದಿ ಇಂಟರ್‌ನ್ಯಾಶನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ರವಿವಾರ ಕೇವಲ 35 ನಿಮಿಷಗಳಲ್ಲಿ ಅಂತ್ಯಗೊಂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತೆ ಸಿಂಧು ಎದುರಾಳಿ ಮಾಳವಿಕಾರನ್ನು 21-13, 21-16 ಅಂತರದಿಂದ ಸುಲಭವಾಗಿ ಮಣಿಸಿದರು.

ಮಾಜಿ ವಿಶ್ವ ಚಾಂಪಿಯನ್ ಸಿಂಧು ಎರಡನೇ ಬಾರಿ ಸಯ್ಯದ್ ಮೋದಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. 2017ರಲ್ಲಿ ಮೊದಲ ಬಾರಿ ಪ್ರಶಸ್ತಿಯನ್ನು ಜಯಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News