ಬೆಂಗಳೂರು: ಬೈಕ್ ಮೇಲೆ ಪಲ್ಟಿಯಾದ ಲಾರಿ; ಪತ್ರಕರ್ತ ಮೃತ್ಯು

Update: 2022-01-23 14:41 GMT
                      ಮೃತ ಪತ್ರಕರ್ತ ಗಂಗಾಧರ ಮೂರ್ತಿ

ಬೆಂಗಳೂರು, ಜ. 23: ಬೆಂಗಳೂರು ಟೌನ್‍ಹಾಲ್ ಮುಂದೆ ಲಾರಿಯೊಂದು ಢಿಕ್ಕಿ ಹೊಡೆದು ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಕನ್ನಡ ದೈನಿಕ ಪತ್ರಿಕೆಯೊಂದರ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ.

ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾರ್ಯನಿರ್ವಹಿಸುತ್ತಿದ್ದ ಕಚೇರಿಗೆ ಬೈಕ್‍ನಲ್ಲಿ ಹೋಗುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಗೆ ಢಿಕ್ಕಿ ಹೊಡೆದು ಬೈಕ್ ಮೇಲೆ ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. 

ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದರು. ಗಂಗಾಧರ ಮೂರ್ತಿ ಅವರ ಪತ್ರಕರ್ತ ವೃತ್ತಿ ಸೇವೆ ಗುರುತಿಸಿ ಕಳೆದ ವರ್ಷ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಕಾರ್ಯ ನಿರತ ಪತ್ರಕರ್ತರ ಸಂಘ ಸನ್ಮಾನಿಸಿತ್ತು.

ಸಂತಾಪ: ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

`ಗಂಗಾಧರ ಮೂರ್ತಿ ಒಬ್ಬ ಸೃಜನಶೀಲ ಪತ್ರಕರ್ತರಾಗಿದ್ದು, ತಮ್ಮ ಕರ್ತವ್ಯವನ್ನು ಅಚ್ಚಕಟ್ಟಾಗಿ ನಿರ್ವಹಿಸುತ್ತಿದ್ದರು. ಅವರ ಸಾವು ನನಗೆ ತುಂಬಾ ಆಘಾತವುಂಟು ಮಾಡಿದೆ. ಕಚೇರಿಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದ್ದು, ನಿಜಕ್ಕೂ ಆಘಾತಕಾರಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬದ ಸದಸ್ಯರಿಗೆ ನೀಡಲಿ'

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News