ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

Update: 2022-01-23 14:53 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ. 23: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಓರ್ವನನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಲಗ್ಗೆರೆ ನಿವಾಸಿ ಆಟೊ ಚಾಲಕ ಅನಿಲ್ ಕುಮಾರ್(36) ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿರುವ ತಾಯಿಯ ಜೊತೆಗೆ ಸಂತ್ರಸ್ತೆ ಲಗ್ಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಕ್ಕದ ಮನೆಯಲ್ಲೇ ಆರೋಪಿ ವಾಸವಾಗಿದ್ದ. ಶನಿವಾರ ಎಂದಿನಂತೆ ತಾಯಿ ಗಾರ್ಮೆಂಟ್ಸ್ ಗೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು ಎನ್ನಲಾಗಿದೆ.

ಸಂಜೆ 7.30ರ ಸುಮಾರಿಗೆ ಆರೋಪಿ, ಬಾಲಕಿಯ ಮನೆಗೆ ಹೋಗಿ, ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ. ಈ ವೇಳೆ ಸಂತ್ರಸ್ತೆ ರಕ್ಷಣೆಗಾಗಿ ಕೂಗಿಕೊಂಡರೂ ಬಿಡದೆ ಆಕೆಯ ಬಾಯಿ ಮುಚ್ಚಿ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.

ಮನೆಗೆ ಬಂದ ತಾಯಿ, ಆಕೆಯನ್ನು ಸಂತೈಸಿ ವಿಚಾರಿಸಿದಾಗ ಆರೋಪಿಯ ಕೃತ್ಯದ ಬಗ್ಗೆ ವಿವರಿಸಿದ್ದಾಳೆ. ಈ ಸಂಬಂಧ ದೂರು ನೀಡಲಾಗಿ, ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ.

ಈ ಸಂಬಂಧ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News