ಕುತೂಹಲಕ್ಕೆ ಕಾರಣವಾದ ಸಚಿವ ಉಮೇಶ್ ಕತ್ತಿ ನೇತೃತ್ವದ ಗೌಪ್ಯ ಸಭೆ

Update: 2022-01-23 15:33 GMT

ಬೆಳಗಾವಿ, ಜ. 23: ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಬಹಿರಂಗ ಹೇಳಿಕೆಗಳ ಬೆನ್ನಲ್ಲೆ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಹೊರತುಪಡಿಸಿ ಜಿಲ್ಲೆಯ ಶಾಸಕರು, ಸಂಸದರು ಗೌಪ್ಯವಾಗಿ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರವಿವಾರ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಶಿವಬಸವ ನಗರದ ಅವರ ನಿವಾಸದಲ್ಲಿ ಬಿಜೆಪಿ ಜಿಲ್ಲಾ ನಾಯಕರ ಸಭೆ ನಡೆದಿದ್ದು, ಈ ಸಭೆಗೆ ಜಾರಕಿಹೊಳಿ ಸಹೋದರರಿಗೆ ಆಹ್ವಾನ ನೀಡದೆ ಇರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸಭೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ್, ಅನಿಲ್ ಬೆನಕೆ, ಮಹಾಂತೇಶ ದೊಡ್ಡಗೌಡರ, ಪಿ.ರಾಜೀವ್, ಮಾಜಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ ಪಾಲ್ಗೊಂಡಿದ್ದರು.

ಸಚಿವವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ವಿಚಾರವಾಗಿ ಸಭೆ ನಡೆಸಲಾಗಿದೆ. ಅಲ್ಲದೆ, ಬಜೆಟ್‍ನಲ್ಲಿ ಜಿಲ್ಲೆಗೆ ಯಾವ ರೀತಿಯ ಲಾಭ ಪಡೆಯಬೇಕು ಎಂಬುದು ಸೇರಿದಂತೆ ಪಕ್ಷ ಸಂಘಟನೆ ಸಂಬಂಧ ಸಭೆ ನಡೆಸಲಾಗಿದ್ದು, ಎಲ್ಲ ಮುಖಂಡರು ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಜಿಲ್ಲೆಯಲ್ಲಿನ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News