ಸುಂಟಿಕೊಪ್ಪ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ; ಪ್ರಯಾಣಿಕರು ಸಣ್ಣಪುಟ್ಟ ಗಾಯ

Update: 2022-01-24 14:29 GMT

ಮಡಿಕೇರಿ: ಸುಂಟಿಕೊಪ್ಪದ ಕೊಡಗರಹಳ್ಳಿ ಬೈತೂರಪ್ಪ ದೇವಾಲಯ ಸಮೀಪದ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಮಡಿಕೇರಿಯಿಂದ ಕುಶಾಲನಗರದ ಕಡೆಗೆ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಬೈತೂರಪ್ಪ ದೇವಾಲಯ ಬಳಿಯಲ್ಲಿರುವ ಮೋರಿಗೆ ಢಿಕ್ಕಿ ಹೊಡೆಯಿತು. ನಂತರ ಕುಶಾಲನಗರದಿಂದ ಸುಂಟಿಕೊಪ್ಪ ಕಡೆಗೆ ಆಗಮಿಸುತ್ತಿದ್ದ ಕಾರಿಗೆ ಅಪ್ಪಳಿಸಿದೆ. ಮಹಿಳೆಯ ಕಾಲಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News