×
Ad

ನಾನು ಸಚಿವ ಸ್ಥಾನದ ರೇಸ್‌ನಲ್ಲಿ ಇಲ್ಲ: ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್

Update: 2022-01-24 22:01 IST

ಮೈಸೂರು,ಜ.24: ನಾನು ಸಚಿವ ಸ್ಥಾನದ ರೇಸ್‌ನಲ್ಲಿ ಇಲ್ಲ. ಮೈಸೂರು ಭಾಗಕ್ಕೆ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಒತ್ತಾಯಿಸಿದರು. 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದ ಮುಂಭಾಗ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಿ. ಹಿರಿಯರಾದ ಎಸ್.ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News