ಕ್ಯಾಮರೂನ್:‌ ಫುಟ್ಬಾಲ್‌ ಟೂರ್ನಿಯ ವೇಳೆ ಕಾಲ್ತುಳಿತದಲ್ಲಿ ಕನಿಷ್ಟ 8 ಮಂದಿ ಮೃತ್ಯು‌

Update: 2022-01-25 18:26 GMT
ಸಾಂದರ್ಭಿಕ ಚಿತ್ರ

ಯಾಂಡೆ, ಜ.25: ಕ್ಯಾಮರೂನ್‌ನಲ್ಲಿ ನಡೆಯುತ್ತಿರುವ ಆಫ್ರಿಕಾ ಕಪ್ ನೇಷನ್ಸ್ ಫುಟ್ಬಾಲ್ ಟೂರ್ನಿಯ ಸಂದರ್ಭ ಕ್ರೀಡಾಂಗಣದಲ್ಲಿ ನಡೆದ ನೂಕುನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಕನಿಷ್ಟ 8 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಮೃತಪಟ್ಟವರಲ್ಲಿ ಮಕ್ಕಳೂ ಸೇರಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಫುಟ್ಬಾಲ್ ಟೂರ್ನಿಯ ಪ್ರಿ-ಕ್ವಾರ್ಟರ್ ಫೈನಲ್ ಹಂತದ ಪಂದ್ಯಗಳು ನಡೆಯುತ್ತಿದ್ದು ಆತಿಥೇಯ ಕ್ಯಾಮರೂನ್ನ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಪ್ರವೇಶಿಸಲು ಅಭಿಮಾನಿಗಳು ಮುಗಿಬಿದ್ದಾಗ ನೂಕುನುಗ್ಗಲು ಉಂಟಾಗಿದೆ. ಕನಿಷ್ಟ 40 ಮಂದಿ ಗಾಯಗೊಂಡಿದ್ದು ಹಲವರ ಪರಿಸ್ಥಿತಿ ಚಿಂತಾಜನಕವಾಗಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಗವರ್ನರ್ ನಾಸಿರ್ ಪಾಲ್ ಬಿಯಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News