×
Ad

ಶುಲ್ಕ ವಿನಾಯಿತಿ ಪಾವತಿಗೆ ಆಧಾರ್ ಸೀಡ್ ಕಡ್ಡಾಯ

Update: 2022-01-25 20:02 IST

ಉಡುಪಿ, ಜ.25: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿ ವೇತನ/ ಶುಲ್ಕ ವಿನಾಯಿತಿ ಸೌಲಭ್ಯಕ್ಕೆ 2020-21ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಹಲವಾರು ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮೊತ್ತವು ಮಂಜೂರಾಗಿದೆ.

ಆದರೆ ಕೆಲವು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಯಾಗದಿರುವ ಕಾರಣ ಹಣ ಸಂದಾಯ ಸಾಧ್ಯವಾಗಿಲ್ಲ.ಆದ್ದರಿಂದ ಸಂಬಂಧಿಸಿದ ವಿದ್ಯಾರ್ಥಿಗಳು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ನಲ್ಲಿ ಐ.ಪಿ.ಪಿ.ಬಿ ಮೂಲಕ ಅಕೌಂಟ್ ತೆರೆದು ಆಧಾರ್ ಸೀಡ್ (ಎನ್.ಪಿ.ಸಿ.ಐ ಮ್ಯಾಪಿಂಗ್) ಅನ್ನು ಜನವರಿ 29ರೊಳಗೆ ಮಾಡಿಸಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿ ಕಾರಿಗಳ ಕಚೇರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಳಿಗಾಗಿ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News