×
Ad

ಜ.26ರಂದು ಉಡುಪಿ ಜಿಲ್ಲೆ ವತಿಯಿಂದ ಗಣರಾಜ್ಯೋತ್ಸವ

Update: 2022-01-25 21:50 IST

ಉಡುಪಿ, ಜ.25: ಜಿಲ್ಲಾಡಳಿತ ಉಡುಪಿ ಜಿಲ್ಲೆ ವತಿಯಿಂದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜ.26ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನೇರ ಪ್ರಸಾರಕ್ಕೆ ವ್ಯವಸ್ಥೆ:   ಜ.26ರಂದು ಬೆಳಗ್ಗೆ 9:00 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ಸಿ4ಯು ಚಾನೆಲ್ (ಡೆನ್ ಕೇಬಲ್ ನೆಟ್‌ವರ್ಕ್‌ನ ಚಾನೆಲ್ ನಂ.747) ನಲ್ಲಿ ಹಾಗೂ ಯೂಟ್ಯೂಬ್ ಲಿಂಕ್ -https://youtu.be/SY5D8TOXlyc-ನಲ್ಲಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News