×
Ad

ಜ.28: ಜಮೀಯ್ಯತುಲ್ ಫಲಾಹ್‌ನಿಂದ ಡಯಾಲಿಸಿಸ್ ಯಂತ್ರ ಹಸ್ತಾಂತರ

Update: 2022-01-25 22:26 IST

ಮಂಗಳೂರು, ಜ.25: ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಪಾಲಿಕೆ ಘಟಕದ ವತಿಯಿಂದ ಡಯಾಲಿಸಿಸ್ ಯಂತ್ರ ಹಸ್ತಾಂತರ, ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಸನ್ಮಾನ ಕಾರ್ಯಕ್ರಮವು ಜ.28ರಂದು ಸಂಜೆ 6:30ಕ್ಕೆ ನಗರದ ಓಶಿಯನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಲಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಮೀಯ್ಯತುಲ್ ಫಲಾಹ್ ಸ್ಥಾಪಕ ಮುಹಮ್ಮದ್ ಇಕ್ಬಾಲ್ ಯೂಸುಫ್, ದ.ಕ.ಜಿಲ್ಲಾಧ್ಯಕ್ಷ ಶಬಿಹ್ ಅಹ್ಮದ್ ಕಾಝಿ, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್, ಎಕ್ಸ್‌ಪರ್ಟೈಸ್ ಗ್ರೂಪ್ ಉಪಾಧ್ಯಕ್ಷ ಹಾಜಿ ಅಬ್ದುಲ್ ರಹೀಂ ಕರ್ನಿರೆ, ಅಲ್ ಮುಝೈನ್ ಗ್ರೂಪ್‌ನ ಅಧ್ಯಕ್ಷ ಹಾಜಿ ಝಕರಿಯಾ ಬಜ್ಪೆ, ಬಾವಾ ಫಿಶ್‌ಮಿಲ್ ಕಂಪೆನಿಯ ಆಡಳಿತ ನಿರ್ದೇಶಕ ಹಾಜಿ ರಿಯಾಝ್ ಬಾವ, ನೆಪ್ರೋಲಾಜಿಸ್ಟ್ ಡಾ. ಜನಾರ್ದನ ಕಾಮತ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕರಿ ರೆ.ಫಾ. ರುಡಾಲ್ಪ್ ರವಿ ಡಿಸೋಜ, ಅಝಾದ್ ಗ್ರೂಪ್‌ನ ಆಡಳಿತ ನಿರ್ದೇಶಕ ಹಾಜಿ ಮನ್ಸೂರ್ ಆಝಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜಮೀಯ್ಯತುಲ್ ಫಲಾಹ್ ನಗರ ಪಾಲಿಕೆ ಘಟಕದ ಅಧ್ಯಕ್ಷ ಹಾಜಿ ಅಬೂಬಕರ್ ಸಿದ್ದೀಕ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News