ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರವಾಸ ರದ್ದು

Update: 2022-01-25 17:48 GMT

ಮಂಗಳೂರು, ಜ.26: ಮಾಜಿ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜ.26ರ ಮಂಗಳೂರು ಪ್ರವಾಸ ರದ್ದಾಗಿದೆ ಎಂದು ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ಜ.26ರಂದು ಜಿಲ್ಲಾದ್ಯಂತ ನಡೆಯುವ ಸ್ವಾಭಿಮಾನಿ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಧರಿಸಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News