ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

Update: 2022-01-25 18:53 GMT

ಹೊಸದಿಲ್ಲಿ, ಜ. 25: ಕೇಂದ್ರ ಬಜೆಟ್ ಫೆಬ್ರವರಿ 1ರಂದು ಪೂರ್ವಾಹ್ನ 11 ಗಂಟೆಗೆ ಮಂಡನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಅದಕ್ಕಿಂತ ಒಂದು ದಿನ ಮೊದಲು ಅಂದರೆ, ಜನವರಿ 31ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೋವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ರಾಜ್ಯ ಸಭೆಯ ಸಮಯ ಬದಲಾವಣೆಯಾಗಲಿದೆ. ಲೋಕಸಭೆ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹಾಗೂ ರಾಜ್ಯ ಸಭೆ ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆ ವರೆಗೆ ಕಾರ್ಯ ನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಜನವರಿ 31 ಹಾಗೂ ಫೆಬ್ರವರಿ 1ರಂದು ಉಭಯ ಸದನಗಳು ಪೂರ್ವಾಹ್ನ 11 ಗಂಟೆಯಿಂದ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವನ್ನು ಜನವರಿ 31ರಿಂದ ಫೆಬ್ರವರಿ 11ರ ವರೆಗೆ ನಡೆಸಲಾಗುವುದು. ಎರಡನೇ ಭಾಗವನ್ನು ಮಾರ್ಚ್ 14ರಿಂದ ಎಪ್ರಿಲ್ 8ರ ವರೆಗೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಆರ್ಥಿಕ ಸಮೀಕ್ಷೆಯನ್ನು ಜನವರಿ 31ರಂದು ಮಧ್ಯಾಹ್ನ ಸದನದಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News