×
Ad

ಉದ್ಯಾವರ ಎಸ್‌ಡಿಎಂ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Update: 2022-01-26 16:28 IST

ಉಡುಪಿ, ಜ.26: ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಮಹಾವಿದ್ಯಾಲಯದಲ್ಲಿ 73ನೆ ಗಣರಾಜ್ಯೋತ್ಸವವನ್ನು ಆಚರಿಸ ಲಾಯಿತು.

ಎಸ್.ಡಿ.ಎಂ. ಕಾಲೇಜಿನ ಹಳೆ ವಿದ್ಯಾರ್ಥಿ ಡಾ.ಕೃಷ್ಣ ಎಂ.ಗೋಖಲೆ ಧ್ವಜಾ ರೋಹಣ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ವಹಿಸಿದ್ದರು.

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ ಎಸ್., ಸ್ನಾತಕೋತ್ತರ ವಿಭಾಗದ ಅಧ್ಯಕ್ಷ ಡಾ.ನಿರಂಜನ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ವೀರಕುಮಾರ ಕೆ., ಕಾಲೇಜಿನ ವ್ಯವಸ್ಥಾಪಕ ಸಿ. ಶ್ರೀನಿವಾಸ ಹೆಗ್ಡೆ, ಆಸ್ಪತ್ರೆಯ ವ್ಯವಸ್ಥಾಪಕ ನಾಗೇಶ್ ಸಿ.ಎಚ್., ದೈಹಿಕ ಶಿಕ್ಷಕ ಆದರ್ಶ್ ಶೆಟ್ಟಿ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ.ವಿದ್ಯಾಲಕ್ಷ್ಮಿ ಸ್ವಾಗತಿಸಿ, ಬಿ.ಜಿ. ಸುಹಾಸ್ ವಂದಿಸಿ, ಹರಿಪ್ರಿಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News