×
Ad

ಭಟ್ಕಳದಲ್ಲಿ ಸರಳ ಗಣರಾಜ್ಯೋತ್ಸವ

Update: 2022-01-26 18:30 IST

ಭಟ್ಕಳ: ದೇಶದಲ್ಲೀಗ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ನಡೆಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಇದೊಂದು ದರಾದೃಷ್ಟಕರ ಬೆಳವಣೆಗೆಯಾಗಿದೆ ಎಂದರು.

ಅವರು ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ 73ನೇ ಗಣರಾಜ್ಯೋತ್ಸವದ ಸರಳ ಸಮರಾಂಭದ ಅಧ್ಯಕ್ಷತೆ ವಹಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನಾರಾಯಣಗುರುಗಳಿಗೆ ಅವರದ್ದೇ ಆದ ಸ್ಥಾನಮಾನವಿದೆ. ಮುಂದಿನ ದಿನಗಳಲ್ಲಿ ಇಂತಹ ಚರ್ಚೆಗಳನ್ನು ನಿಲ್ಲಿಸಬೇಕೆಂದು ಅವರು ಅವರು ಮನವಿ ಮಾಡಿಕೊಂಡರು. 

ಸಮಾರಂಭ ಉದ್ಘಾಟಿಸಿ ಮಾತನಾಡಿದ ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಮಮತಾ ದೇವಿ, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದ ಅವರು ಸಂವಿಧಾನದ ಪ್ರಸ್ತಾವನೆಯ ಪೀಠಿಕೆ ಯನ್ನು ವಾಚಿಸಿ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಸಂಭ್ರಮದಲ್ಲಿರುವ ನಾವು ದೇಶವನ್ನು ಬಲಿಷ್ಠಗೊಳಿಸಬೇಕಾಗಿದೆ ಎಂದು ಕರೆ ನೀಡಿದರು.

ತಹಶೀಲ್ದಾರ ರವಿಚಂದ್ರ ಸ್ವಾಗತಿಸಿದರು. ಕ್ಷೇತ್ರಶಿಕ್ಷಣಾಧಿಕಾರಿ ದೇವಿದಾಸ ಮೊಗೇರ್ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕ ಶ್ರೀಧರ್ ಶೇಠ್, ಸುರೇಶ ಮುರ್ಡೇಶ್ವರ ಕಾರ್ಯಕ್ರಮ ನಿರೂಪಿಸಿದರು. ಭಟ್ಕಳ ಪುರಸಭಾಧ್ಯಕ್ಷ ಪರ್ವೇಝ್ ಕಾಶಿಮಜಿ, ಮುಖ್ಯಾಧಿಕಾರಿ ರಾಧಿಕಾ, ತಾ.ಪಂ. ಕಾರ್ಯನಿರ್ವಾಣಾಧಿಕಾರಿ, ಭಟ್ಕಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸೇರಿದಂತೆ ತಾಲೂಕಿನ ಪ್ರಮುಖ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News