ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

Update: 2022-01-26 15:37 GMT
 ಬಿ.ಕೆ. ಹರಿ ಪ್ರಸಾದ್ 

ಬೆಂಗಳೂರು, ಜ.26: ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಹಿರಿಯ ಮುಖಂಡ ಬಿ.ಕೆ. ಹರಿ ಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ‌.

ಬುಧವಾರ ಈ ಸಂಬಂಧ ಆದೇಶ ಹೊರಬಿದ್ದಿದ್ದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರನ್ನಾಗಿ ಪ್ರಕಾಶ್ ರಾಠೋಡ್ ಅವರನ್ಮು ನಿಯೋಜನೆ ಮಾಡಲಾಗಿದೆ.

ಇದೇ ವೇಳೆ ಪರಿಷತ್ ವಿಪಕ್ಷಗಳ ಉಪನಾಯಕರನ್ನಾಗಿ ಕೆ.ಗೋವಿಂದ ರಾಜು ಅವರನ್ನು ನೇಮಿಸಲಾಗಿದೆ.

ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರಾದ ನಸೀರ್ ಅಹ್ಮದ್ ಅಥವಾ ಸಿ.ಎಂ.ಇಬ್ರಾಹಿಂ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ, ಇದೀಗ ಎಐಸಿಸಿ ಅಂತಿಮ ಆದೇಶ ಹೊರಡಿಸಿದೆ. 

ಪರಿಷತ್ ವಿಪಕ್ಷ ನಾಯಕರಾಗಿದ್ದ ಎಸ್.ಆರ್. ಪಾಟೀಲ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಖಾಲಿ ಇದ್ದ ಆ ಸ್ಥಾನಕ್ಕೆ ಕಾಂಗ್ರೆಸ್ ವರಿಷ್ಟರು ನೇಮಕ ಮಾಡಿದ್ದಾರೆ.

ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಈ ಕುರಿತು ಸಭಾಪತಿ ಬಸವರಾಜ ಹೊರಟ್ಟಿ ಕೆಲ ಪ್ರಕ್ರಿಯೆಗಳ ಬಳಿಕ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಗಳಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News