ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Update: 2022-01-26 21:46 IST
ಬೆಂಗಳೂರು, ಜ.26: ಮುಂಬರುವ ವಿಧಾನಪರಿಷತ್ ನ ದಕ್ಷಿಣ ಪದವೀಧರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಮಧು ಜಿ.ಮಾದೇಗೌಡ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಸವರಾಜ ಗುರಿಕಾರ ಅವರಿಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.