ಅಟಾರಿ-ವಾಘಾ ಗಡಿಯಲ್ಲಿ ಬಿಎಸ್ಎಫ್, ಪಾಕಿಸ್ತಾನ ಸೇನೆ ಸಿಹಿ ವಿನಿಮಯ‌

Update: 2022-01-26 16:31 GMT

ಅಮೃತಸರ, ಜ. 26: ದೇಶದ 73ನೇ ಗಣರಾಜ್ಯೋತ್ಸವ ದಿನವಾದ ಬುಧವಾರ ಅಟಾರಿ-ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಹಾಗೂ ಪಾಕಿಸ್ತಾನ ಸೇನೆಗಳು ಪರಿಸ್ಪರ ಅಭಿನಂದಿಸಿ ಸಿಹಿ ವಿನಿಮಯ ಮಾಡಿಕೊಂಡಿವೆ.

 ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಸಾವನ್ನಪ್ಪಿದ ಯೋಧರಿಗೆ ಹೊಸದಿಲ್ಲಿಯಲ್ಲಿ ನೂತನವಾಗಿ ನಿರ್ಮಿಸಲಾದ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಸಂದರ್ಭ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್ ಭಟ್, ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಹಾಗೂ ಭಾರತೀಯ ಶಸಸ್ತ್ರ ಪಡೆಗಳ ವರಿಷ್ಠರು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆಯ 75ನೇ ವರ್ಷದಲ್ಲಿ ನಡೆಯುತ್ತಿರುವ ಈ ಗಣರಾಜ್ಯೋತ್ಸವ ದಿನಕ್ಕೆ ವಿಶೇಷವಾದ ಅರ್ಥವಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News