ದೇರಳಕಟ್ಟೆ: ಎಸ್ಕೆಎಸ್ಸೆಸ್ಸೆಫ್‌ನಿಂದ ಮಾನವ ಸರಪಳಿ ಕಾರ್ಯಕ್ರಮ

Update: 2022-01-26 17:32 GMT

ಕೊಣಾಜೆ, ಜ.26: ‘ರಾಷ್ಟ್ರ ರಕ್ಷಣೆಗೆ ಸೌಹಾರ್ದದ ಸಂಕಲ್ಪ’ ಧ್ಯೇಯವಾಕ್ಯದಡಿ ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಾನವ ಸರಪಳಿ ಕಾರ್ಯಕ್ರಮವು ದೇರಳಕಟ್ಟೆ ಮರ್ಹೂಮ್ ಶೈಖುನಾ ಮಿತ್ತಬೈಲ್ ಉಸ್ತಾದ್ ವೇದಿಕೆಯಲ್ಲಿ ಬುಧವಾರ ನಡೆಯಿತು.

ದಕ್ಷಿಣ ಕರ್ನಾಟಕ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯದ್ ಝೈನುಲ್ ಅಬಿದೀನ್ ತಂಙಳ್ ಕುನ್ನುಂಗೈ ದುಆಗೈದು ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಭಾಷಣ ಮಾಡಿದ ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಎಸ್ಕೆಎಸ್ಸೆಸ್ಸೆಫ್ ಗಣರಾಜ್ಯೋತ್ಸವದ ಸಂದರ್ಭ ದೇಶಾದ್ಯಂತ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ದೇಶಪ್ರೇಮ, ಜಾತ್ಯತೀತತೆ, ಐಕ್ಯವನ್ನು ಗಟ್ಟಿಗೊಳಿಸುವ ಕಾರ್ಯ ಮಾಡುತ್ತಿದೆ ಎಂದರು.

ಶಾಸಕ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾಧ್ಯಕ್ಷ ಸೈಯದ್ ಅಮೀರ್ ತಂಙಳ್ ಕಿನ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾ ಜೊತೆ ಕಾರ್ಯದರ್ಶಿ ಎ.ಕೆ.ಅಬ್ದುಲ್ ಖಾದರ್ ಕಣ್ಣೂರು ಪ್ರತಿಜ್ಞಾವಿಧಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಪುರವಣಿಯನ್ನು ಬಿಡುಗಡೆಗೊಳಿಸಲಾಯಿತು. ವಿಖಾಯ ತಂಡದಿಂದ ಆಕರ್ಷಕ ಪಥಸಂಚಲನ ನಡೆಯಿತು.

ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಜಂಇಯ್ಯತುಲ್ ಮುದರ್ರಿಸೀನ್‌ನ ಅಧ್ಯಕ್ಷ ಉಸ್ಮಾನ್ ಫೈಝಿ, ರಾಜ್ಯ ದಾರಿಮೀಸ್ ಉಲಮಾ ಒಕ್ಕೂಟದ ಅಧ್ಯಕ್ಷ ಎಸ್‌ಬಿ ಮುಹಮ್ಮದ್ ದಾರಿಮಿ, ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ, ಜಿಲ್ಲಾ ಉಪಾಧ್ಯಕ್ಷ ಸಿದ್ದೀಕ್ ಅಬ್ದುಲ್ ಖಾದರ್, ಮುಫತ್ತಿಸ್ ಹನೀಫ್ ಮುಸ್ಲಿಯಾರ್, ಅಡ್ಡೂರು ಜುಮಾ ಮಸೀದಿಯ ಖತೀಬ್ ಸ್ವದಖತುಲ್ಲಾ ಫೈಝಿ, ದೇರಳಕಟ್ಟೆಯ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇಸಾಕ್ ಫೈಝಿ, ಮ್ಯಾನೇಜ್‌ಮೆಂಟ್ ಅಧ್ಯಕ್ಷ ಐ. ಮೊಯ್ದಿನಬ್ಬ ಹಾಜಿ, ಶಂಸುದ್ದೀನ್ ದಾರಿಮಿ, ಸಮಸ್ತ ಮತ ವಿದ್ಯಾಭ್ಯಾಸ ಬೋರ್ಡ್ ಸದಸ್ಯರಾದ ರಶೀದ್ ಹಾಜಿ ಪೆರ್ಲಡ್ಕ, ರಫೀಕ್ ಹಾಜಿ ಕೊಡಾಜೆ, ಅಬ್ದುಲ್ ಲತೀಫ್ ದಾರಿಮಿ, ಅಬೂಬಕರ್ ಮಂಗಳ, ನೌಶಾದ್ ದೇರಳಕಟ್ಟೆ, ಅಶ್ರಫ್ ಮರಾಠಿಮೂಲೆ, ಎಸ್ಕೆಎಸ್‌ಬಿವಿ ಜಿಲ್ಲಾಧ್ಯಕ್ಷ ಮುಹಮ್ಮದ್ ಮನ್ಸೂರ್, ಎಸ್ಕೆಎಸ್‌ಬಿವಿ ಜಿಲ್ಲಾ ಕಾರ್ಯದರ್ಶಿ ಫರ್ವೇಝ್ ಅಬ್ರಾರ್ ಮತ್ತಿತರರು ಉಪಸ್ಥಿತರಿದ್ದರು. ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕ ಫಾರೂಕ್ ದಾರಿಮಿ ಗ್ರಾಮಚಾವಡಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News