​ದೆಹಲಿಯಲ್ಲಿ ಶೀಘ್ರವೇ ಸಂಗೊಳ್ಳಿ ರಾಯಣ್ಣ ಪ್ರತಿಮೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2022-01-27 02:42 GMT

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಅನಾವರಣ ಮಾಡಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

ರಾಜಧಾನಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಇದ್ದು, ಇದರ ಬಳಿಯೇ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನೂ ನಿರ್ಮಿಸುವಂತೆ ಮನವಿ ಮಾಡಲಾಗಿದೆ. ಬೆಂಗಳೂರು ರಸ್ತೆಗಳಿಗೆ ಸ್ವಾತಂತ್ರ್ಯ ಯೋಧರ ಹೆಸರು ಇಡಬೇಕು ಎಂದು ಆಗ್ರಹಿಸಿ ಸಂಸದ ಪಿ.ಸಿ.ಮೋಹನ್ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಸೂಕ್ತ ನಿರ್ಧಾರವನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಎಲ್ಲ ಶಾಲೆ ಮತ್ತು ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಪ್ರದರ್ಶಿಸುವಂತೆ ಆದೇಶವನ್ನು ಶೀಘ್ರವೇ ಹೊರಡಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ರಾಯಣ್ಣ ಅವರ 191ನೇ ಸಂಸ್ಮರಣಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಯಣ್ಣ ಹೆಸರಿನಲ್ಲಿ 180 ಕೋಟಿ ವೆಚ್ಚದ ಸೈನಿಕ ಶಾಲೆ ನಿರ್ಮಿಸಲಾಗುತ್ತಿದ್ದು, ಈಗಾಗಲೇ 55 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು. ಈ ವರ್ಷದ ಕೊನೆಗೆ ಕಾಮಗಾರಿ ಮುಕ್ತಾಯವಾಗಲಿದ್ದು, ಈ ಶಾಲೆಯನ್ನು ಪಡೆದುಕೊಳ್ಳುವಂತೆ ರಕ್ಷಣಾ ಸಚಿವಾಲಯಕ್ಕೆ ಮನವಿ ಮಾಡಲಾಗುವುದು ಎಂದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News