×
Ad

ಮಂಗಳೂರು: ಜಮೀಯ್ಯತುಲ್ ಫಲಾಹ್ ನಿಂದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

Update: 2022-01-27 13:25 IST

ಮಂಗಳೂರು, ಜ.27: ಜಮೀಯ್ಯತುಲ್ ಫಲಾಹ್ ಮಂಗಳೂರು ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಕಂಕನಾಡಿ ಜಮೀಯ್ಯತುಲ್ ಫಲಾಹ್ ಸಭಾ ಭವನದಲ್ಲಿ ಬುಧವಾರ ನಡೆಯಿತು.

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ಶಾಸಕ ಯು.ಟಿ.ಖಾದರ್, ವಿದ್ಯಾರ್ಥಿಗಳು ಕಷ್ಟಪಟ್ಟು ಕಲಿತರೆ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ತಂದೆ ತಾಯಿಯಂದಿರು ಮಕ್ಕಳಿಗೆ ತಮ್ಮ ಸಮಸ್ಯೆಯನ್ನು ಬದಿಗೊತ್ತಿ ವಿದ್ಯಾಭ್ಯಾಸವನ್ನು ನೀಡಿದರೆ ಮುಂದಿನ ದಿನಗಳಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುತ್ತಾರೆ. ಹಾಗೂ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ಮುಂದಿನ ದಿನಗಳಲ್ಲಿ ನಿಮ್ಮಿಂದ ಹಲವಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಂತಾಗಲಿ ಎಂದರು.

ಮಂಗಳೂರು ತಾಲೂಕು ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಎಂ.ಎಚ್.ಮಲಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ದ.ಕ, ಉಡುಪಿ ಜಮೀಯ್ಯತುಲ್ ಫಲಾಹ್  ಅಧ್ಯಕ್ಷ ಅಲ್ಹಾಜ್ ಶಬೀ ಅಹ್ಮದ್ ಖಾಝಿ, ಪ್ರಧಾನ ಕಾರ್ಯದರ್ಶಿ ಫಝಲ್ ರಹೀಂ ಕೆ., ಕೋಶಾಧಿಕಾರಿ ಎಫ್.ಎಂ.ಬಶೀರ್, ಮಂಗಳೂರು ತಾಲೂಕು ಜಮೀಯ್ಯತುಲ್ ಫಲಾಹ್ ಸಂಸ್ಥೆಯ ಕೋಶಾಧಿಕಾರಿ ಇಬ್ರಾಹೀಂ ಕೋಡಿಜಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಮಂಗಳೂರು ತಾಲೂಕು ಜಮೀಯ್ಯತುಲ್ ಫಲಾಹ್ ಸಂಸ್ಥೆಯ ಕಾರ್ಯದರ್ಶಿ ಹಾಜಿ ಅಹ್ಮದ್ ಕುಂಞಿ ಸ್ವಾಗತಿಸಿದರು. ಸದಸ್ಯರಾದ ಅಬ್ದುಲ್ ವಹ್ಹಾಬ್ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಟಿ.ಎಂ.ಇರ್ಫಾನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News