ಮಾಲ್ದಾರೆ ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

Update: 2022-01-27 10:59 GMT

ಮಡಿಕೇರಿ ಜ.27: ಮಾಲ್ದಾರೆ ಗ್ರಾಪಂ ವ್ಯಾಪ್ತಿಯ ಮಾರ್ಗೊಲ್ಲಿ ಕಾಫಿ ತೋಟದಲ್ಲಿ ಹುಲಿಯೊಂದು ಕಾಣಿಸಿಕೊಂಡಿದೆ. ಕೆಲವು ದಿನಗಳ ಹಿಂದೆ ಇಂತಹದ್ದೇ ಹುಲಿಯೊಂದು ಆನೆ ಕಂದಕದ ಬಳಿಯೂ ಪ್ರತ್ಯಕ್ಷವಾಗಿತ್ತು.

ಹಾಡಹಗಲೇ ಕಾಫಿ ತೋಟದಲ್ಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಾರ್ಮಿಕರು ತೋಟಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ಕಾಫಿ ಮತ್ತು ಕಾಳುಮೆಣಸು ಕೊಯ್ಲು ಆಗದೆ ತೋಟದ ಮಾಲಕರು ನಷ್ಟ ಅನುಭವಿಸುತ್ತಿದ್ದಾರೆ. ಇಷ್ಟು ದಿನ ಕಾಡಾನೆ ಮತ್ತು ಮಂಗಗಳ ಹಾವಳಿಯಿಂದ ಬೇಸತ್ತಿದ್ದ ಬೆಳೆಗಾರರು ಇದೀಗ ಹುಲಿ ಉಪಟಳದಿಂದ ಕಂಗೆಟ್ಟಿದ್ದಾರೆ.

ಕಳೆದ ಒಂದು ವಾರದಿಂದ ಹುಲಿ ಈ ಭಾಗದಲ್ಲಿ ಸಂಚರಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ತಕ್ಷಣ ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News