ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಆರೋಪ: ಜಿಲ್ಲಾ ನ್ಯಾಯಾಧೀಶರ ಬಂಧನಕ್ಕೆ ಡಿಎಚ್‍ಎಸ್ ಆಗ್ರಹ

Update: 2022-01-27 12:17 GMT

ಬೆಂಗಳೂರು, ಜ. 27: `ರಾಯಚೂರು ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಫೋಟೋವನ್ನು ತೆಗಿಸಿ ಅಪಮಾನಿಸಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಅವರು ತೀವ್ರ ಸ್ವರೂಪದ ಜಾತಿ ತಾರತಮ್ಯ, ಅಸ್ಪೃಶ್ಯತೆ ಆಚರಿಸಿದ್ದಾರೆ. ಬೇಲಿಯೇ ಎದ್ದು ಹೊಲ ಮೇದಂತೆ ಆಗಿದೆ' ಎಂದು ದಲಿತ ಹಕ್ಕುಗಳ ಸಮಿತಿ ಟೀಕಿಸಿದೆ.

'ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಇಂತಹ ಘೋರ ಕೃತ್ಯವನ್ನು ದಲಿತ ಹಕ್ಕುಗಳ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ. ಸರಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ನ್ಯಾಯಾಧೀಶ ಮಲ್ಲಿಕಾರ್ಜುನ್ ಅವರನ್ನು ತಕ್ಷಣ ಅಮಾನತ್ತು ಮಾಡಿ, ಅವರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಅನ್ವಯ ಬಂಧಿಸಬೇಕೇಂದು ಒತ್ತಾಯಿಸುತ್ತೇವೆ. ನ್ಯಾಯಾಧೀಶರ ಅನಾಗರಿಕ ನಡವಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು' ಎಂದು ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News