ಡಾ.ಅಂಬೇಡ್ಕರ್‌ ಭಾವಚಿತ್ರಕ್ಕೆ ಅಗೌರವ ಆರೋಪ: ನ್ಯಾಯಾಧೀಶರು ಹೇಳಿದ್ದೇನು?

Update: 2022-01-27 16:00 GMT

ರಾಯಚೂರು: ಡಾ. ಅಂಬೇಡ್ಕರ್‌ ಭಾವಚಿತ್ರಕ್ಕೆ ಅಗೌರವ ಮಾಡಿದ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ನಾನು ಡಾ. ಅಂಬೇಡ್ಕರ್ ಫೋಟೋ ತೆಗೆದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆಂದು ಎಂದು ಅಪಪ್ರಚಾರ ಮಾಡಿದ್ದಾರೆ. ನನ್ನ ಬಗ್ಗೆ ಯಾವ ಉದ್ದೇಶ ಇಟ್ಟುಕೊಂಡು ಅಪಪ್ರಚಾರ ಮಾಡಿದ್ದಾರೆಂದು ನನಗೆ ತಿಳಿದಿಲ್ಲ. ಕಾರಣ ಅವರ ವದಂತಿ ಸುಳ್ಳಾಗಿದ್ದು, ಅದನ್ನು ನಂಬಬೇಡಿ ಎಂದು ಅವರು ಹೇಳಿದ್ದಾರೆ.

"ಯಾವುದೇ ವ್ಯಕ್ತಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದನ್ನು ಮತ್ತು ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿರುವುದಿಲ್ಲ. ಈ ಸತ್ಯ ಘಟನೆಯನ್ನು ಮರೆಮಾಚಿ 'ನಾನು ಡಾ. ಅಂಬೇಡ್ಕರ್ ಫೋಟೋ ತೆಗೆದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆಂದು ಎಂದು ಅಪಪ್ರಚಾರ ಮಾಡಿದ್ದಾರೆ. ಆದರೆ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬಗ್ಗೆ ಅಪಾರ ಗೌರವ ಅಭಿಮಾನವಿದೆ. ಪ್ರತಿವರ್ಷ ನ.26ರಂದು ಸಂವಿಧಾನ ದಿನಚರಣೆ ಮಾಡುತ್ತಾ ಬಂದಿದ್ದು, ಆ ಸಮಯದಲ್ಲಿ ನಾನು 'ಅಂತಹ ಮಹಾನ್ ವ್ಯಕ್ತಿಗಳ ತತ್ವ, ಆದರ್ಶ ಮತ್ತು ನಡೆ ನುಡಿಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದು ವಿನಂತಿಸಿಕೊಂಡಿದ್ದೇನೆ. ಅಂತಹ ಮಹಾನ್ ವ್ಯಕ್ತಿಗೆ ನಾನು ಅಗೌರವ ತೋರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ, ನನ್ನ ಬಗ್ಗೆ ಯಾವ ಉದ್ದೇಶ ಇಟ್ಟುಕೊಂಡು ಅಪಪ್ರಚಾರ ಮಾಡಿದ್ದಾರೆಂದು ನನಗೆ ತಿಳಿಯದಾಗಿದೆ. ಕಾರಣ ಅವರ ವದಂತಿ ಸುಳ್ಳಾಗಿದ್ದು, ಅದನ್ನು ನಂಬಬೇಡಿ ಎಂದು ಎಲ್ಲರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ 'ದೇಶದ್ರೋಹ ಪ್ರಕರಣ' ದಾಖಲಿಸಲು ಒತ್ತಾಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅಗೌರವ ತೋರಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು. ಅಲ್ಲದೆ, ಅವರನ್ನು ಕೂಡಲೇ ನ್ಯಾಯಾಧೀಶ ಹುದ್ದೆಯಿಂದ ಅಮಾನತ್ತುಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News