ಜ.28ರಂದು ಗಣಿ - ಭೂ ವಿಜ್ಞಾನ ಸಚಿವರು ಉಡುಪಿಗೆ

Update: 2022-01-27 14:48 GMT

ಉಡುಪಿ, ಜ.27: ರಾಜ್ಯದ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವ ಆಚಾರ ಹಾಲಪ್ಪ ಬಸಪ್ಪ, ಜ.28ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಮಂಗಳೂರಿಗೆ ತೆರಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News